Land Conversion Update 2026: ಅಫಿಡವಿಟ್ ಅರ್ಜಿಗಳಿಗೆ ಸಮಯ ಮಿತಿ ಕಡ್ಡಾಯ!

Land Conversion Update 2026: ಅಫಿಡವಿಟ್ ಅರ್ಜಿಗಳಿಗೆ ಸಮಯ ಮಿತಿ ಕಡ್ಡಾಯ!

 

Land Conversion Update 2026: ಅಫಿಡವಿಟ್ ಆಧಾರಿತ ಭೂಪರಿವರ್ತನೆಗಾಗಿ ಸಲ್ಲಿಸಿರುವ ಅರ್ಜಿಗಳಿಗೆ ನಿಗದಿತ ಅವಧಿಯಲ್ಲಿ ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ಮಾಹಿತಿ. ಅರ್ಜಿ ಪ್ರಕ್ರಿಯೆ, ಗಡುವು ಹಾಗೂ ಸರ್ಕಾರದ ಸೂಚನೆಗಳ ವಿವರ ಇಲ್ಲಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95 ಕ್ಕೆ ಸಂಬಂಧಿಸಿದಂತೆ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಭೂ ಪರಿವರ್ತನೆ ಪ್ರಕ್ರಿಯೆಗಳನ್ನು ಸರಳೀಕರಿಸುವ ಉದ್ದೇಶದಿಂದ ಕರ್ನಾಟಕ ಭೂ ಕಂದಾಯ ನಿಯಮಗಳು, 1966 ನಿಯಮ 106 ಸಿ, 106 ಡಿ, 106 ಇ ಮತ್ತು 106 ಎಫ್ ಗಳಲ್ಲಿ ಸೂಕ್ತ ತಿದ್ದುಪಡಿ ಮಾಡಿ ದಿನಾಂಕ:23.12.2025 ರಿಂದ ಜಾರಿಗೆ ಬರುವಂತೆ ಅಧಿಸೂಚನೆ ಹೊರಡಿಸಲಾಗಿರುತ್ತದೆ.

ಈ ಕುರಿತು ಉಲ್ಲೇಖಿತ ಪತ್ರದಲ್ಲಿ ಮಾಸ್ಟರ್ ಪ್ಲಾನ್ ವ್ಯಾಪ್ತಿಯ ಹೊರಗಡೆ ಬರುವ ಜಮೀನುಗಳಲ್ಲಿ ಅಫಿಡವಿಟ್ ಆಧಾರಿತ ಭೂಪರಿವರ್ತನೆಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ನಿಯಮಾನುಸಾರ ಅರ್ಜಿಗಳನ್ನು ಪರಿಶೀಲಿಸಿ, ವಿಲೇವಾರಿ ಮಾಡಲು ಹಾಗೂ ಅರ್ಜಿ ಸಲ್ಲಿಸಿದ ದಿನಾಂಕದಿಂದ 30 ದಿನಗಳ ಒಳಗೆ ಜಿಲ್ಲಾಧಿಕಾರಿಗಳು ಯಾವುದೇ ನಿರ್ಧಾರ ಕೈಗೊಳ್ಳದಿದ್ದಲ್ಲಿ, ಅರ್ಜಿದಾರರು ಭೂ ಪರಿವರ್ತನಾ ಶುಲ್ಕ ಪಾವತಿಸಿದ್ದಲ್ಲಿ ಪರಿಭಾವಿತ ಭೂಪರಿವರ್ತನೆ (Deemed Conversion) ಎಂದು ಭಾವಿಸಿ ಸ್ವಯಂಚಾಲಿತವಾಗಿ ತಂತ್ರಾಂಶದ ಮೂಲಕ ಅನುಮೋದನೆ ನೀಡಲಾಗುವುದು ಎಂದು ತಿಳಿಸಲಾಗಿರುತ್ತದೆ.

ಅದರಂತೆ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ತಾಲ್ಲೂಕು ತಹಶೀಲ್ದಾರರು, ಅರಣ್ಯ ಇಲಾಖೆ ಮೊದಲಾದ ಸಂಬಂಧಪಟ್ಟ ಇಲಾಖೆಗಳು ಅಭಿಪ್ರಾಯ ನೀಡಲು 15 ದಿನಗಳ ಕಾಲಾವಕಾಶವಿದ್ದು, ಜಿಲ್ಲಾಧಿಕಾರಿಗಳ ಕಛೇರಿ ವಿಷಯ ನಿರ್ವಾಹಕರಿಗೆ 5 ದಿನಗಳು. ಅಪರ ಜಿಲ್ಲಾಧಿಕಾರಿಗಳಿಗೆ 5 ದಿನಗಳು ಹಾಗೂ ಜಿಲ್ಲಾಧಿಕಾರಿಗಳಿಗೆ 5 ದಿನಗಳ ಕಾಲಾವಕಾಶ ಇರುತ್ತದೆ.

ಆದುದರಿಂದ ಇನ್ನು ಮುಂದೆ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗೆ ಸಂಬಂಧಿಸಿದಂತೆ ಒಟ್ಟು 30 ಕೆಲಸದ ದಿನಗಳಲ್ಲಿ ಜಿಲ್ಲಾಧಿಕಾರಿಗಳು ತೀರ್ಮಾನ ಕೈಗೊಳ್ಳದಿದ್ದಲ್ಲಿ, ಸದರಿ ಭೂಪರಿವರ್ತನಾ ಅರ್ಜಿಗೆ ಅನುಮೋದನೆ ಇದೆ ಎಂದು ಪರಿಗಣಿಸಿ, ಶುಲ್ಕ ಪಾವತಿಗಾಗಿ ಅರ್ಜಿದಾರರ ಲಾಗಿನ್ ಗೆ ವರ್ಗಾವಣೆಯಾಗುತ್ತದೆ.

ಹಾಗೂ ಶುಲ್ಕ ಪಾವತಿಯಾದ ನಂತರ ತಂತ್ರಾಂಶದ ಮೂಲಕ ಸ್ವಯಂಚಾಲಿತವಾಗಿ ಭೂಪರಿವರ್ತನೆ ಆದೇಶವನ್ನು ಸೃಜಿಸಲ್ಪಡುತ್ತದೆ ಎಂಬ ಅಂಶವನ್ನು ಈ ಮೂಲಕ ತಿಳಿಸಿದೆ.

Land Conversion

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Author: mastermitra

Leave a Reply

Your email address will not be published. Required fields are marked *