National Teachers Award 2026: ಅರ್ಹ ಶಿಕ್ಷಕರಿಂದ ಸ್ವಯಂ-ನಾಮನಿರ್ದೇಶನಕ್ಕೆ ಆಹ್ವಾನ
National Teachers Award 2026: ಸನ್ 2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಅರ್ಜಿ ಆಹ್ವಾನ. ಅರ್ಹ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಶಿಕ್ಷಕರು ಜುಲೈ 10, 2026ರೊಳಗೆ ಆನ್‌ಲೈನ್‌ನಲ್ಲಿ ಸ್ವಯಂ-ನಾಮನಿರ್ದೇಶನ ಸಲ್ಲಿಸಿ.
2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ (National Teachers Awards 2026)ಗೆ ದೇಶದಾದ್ಯಂತ ಅರ್ಹ ಶಿಕ್ಷಕರಿಂದ ಆನ್‌ಲೈನ್ ಸ್ವಯಂ-ನಾಮನಿರ್ದೇಶನ (Self-Nomination) ಆಹ್ವಾನಿಸಲಾಗಿದೆ. ಈ ಸಂಬಂಧ ಶಿಕ್ಷಣ ಸಚಿವಾಲಯವು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್ ಅನ್ನು ತೆರೆಯಲಾಗಿದ್ದು, ಅರ್ಹ ಶಿಕ್ಷಕರು ನಿಗದಿತ ಅವಧಿಯೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಆರಂಭ:
2026ನೇ ಸಾಲಿನ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗಾಗಿ 2026ರ ಜೂನ್ 15ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಹ ಶಿಕ್ಷಕರು ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡು ಸ್ವಯಂ-ನಾಮನಿರ್ದೇಶನ ಸಲ್ಲಿಸಬೇಕು.
ಯಾರು ಅರ್ಜಿ ಸಲ್ಲಿಸಬಹುದು?
ಕರ್ನಾಟಕ ರಾಜ್ಯದ ಕೆಳಕಂಡ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಹ ಶಿಕ್ಷಕರು ಅರ್ಜಿ ಸಲ್ಲಿಸಬಹುದು.
- ಸರ್ಕಾರಿ ಶಾಲೆಗಳ ಶಿಕ್ಷಕರು
- ಅನುದಾನಿತ ಶಾಲೆಗಳ ಶಿಕ್ಷಕರು
- ಅನುದಾನ ರಹಿತ (ಖಾಸಗಿ) ಶಾಲೆಗಳ ಶಿಕ್ಷಕರು
ಅರ್ಜಿದಾರರು ಸಂಬಂಧಿತ ಮಾರ್ಗಸೂಚಿಗಳನ್ನು ಅಧ್ಯಯನ ಮಾಡಿ, ಅರ್ಹತೆಗಳನ್ನು ಪರಿಶೀಲಿಸಿ ಅರ್ಜಿ ಸಲ್ಲಿಸುವುದು ಅಗತ್ಯವಾಗಿದೆ.
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ: 15-06-2026
- ಸ್ವಯಂ-ನಾಮನಿರ್ದೇಶನ ಸಲ್ಲಿಸಲು ಕೊನೆಯ ದಿನ: 10-07-2026
- ಅರ್ಜಿಯನ್ನು ಅಂತಿಮಗೊಳಿಸಿ ಸಲ್ಲಿಸಲು ಕೊನೆಯ ದಿನ: 13-07-2026
ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ:
ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಈ ಮಾಹಿತಿಯನ್ನು ವ್ಯಾಪಕವಾಗಿ ತಲುಪಿಸುವಂತೆ ಸೂಚಿಸಲಾಗಿದೆ. ಜೊತೆಗೆ, ಅರ್ಹ ಶಿಕ್ಷರು ಹೆಚ್ಚಿನ ಸಂಖ್ಯೆಯಲ್ಲಿ ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು.
ವಿಶೇಷ ಸೂಚನೆ:
ರಾಜ್ಯದ ಪ್ರತಿ ಜಿಲ್ಲೆಯಿಂದ ಕನಿಷ್ಠ 60 ಶಿಕ್ಷಕರು ಕಡ್ಡಾಯವಾಗಿ ಸ್ವಯಂ-ನಾಮನಿರ್ದೇಶನ ಸಲ್ಲಿಸುವಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ ಮತ್ತು ಅಭಿವೃದ್ಧಿ) ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.
ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಶಿಕ್ಷಕರ ಅತ್ಯುತ್ತಮ ಸೇವೆಯನ್ನು ಗುರುತಿಸಿ ಗೌರವಿಸುವ ಪ್ರತಿಷ್ಠಿತ ಪ್ರಶಸ್ತಿಯಾಗಿದೆ. ಅರ್ಹ ಶಿಕ್ಷಕರು ಕೊನೆಯ ದಿನಾಂಕದವರೆಗೆ ಕಾಯದೆ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿ ಸಮಯಕ್ಕೆ ಸರಿಯಾಗಿ ತಮ್ಮ ಸ್ವಯಂ-ನಾಮನಿರ್ದೇಶನವನ್ನು ಸಲ್ಲಿಸುವುದು ಒಳಿತು

ಅರ್ಜಿ ಸಲ್ಲಿಸಲು ಪೋರ್ಟಲ್:
https://nationalawardstoteachers.education.gov.in