NMMS Scholarship Exam 2025-26: ಎಲ್ಲಾ ನೋಂದಾಯಿತ ವಿದ್ಯಾರ್ಥಿಗಳ ಪರೀಕ್ಷಾ ಹಾಜರಾತಿಗೆ ಆದೇಶ

NMMS Scholarship Exam 2025-26: ಎಲ್ಲಾ ನೋಂದಾಯಿತ ವಿದ್ಯಾರ್ಥಿಗಳ ಪರೀಕ್ಷಾ ಹಾಜರಾತಿಗೆ ಆದೇಶ

 

NMMS Scholarship Exam 2025-26: ಎಲ್ಲಾ ನೋಂದಾಯಿತ ವಿದ್ಯಾರ್ಥಿಗಳ ಪರೀಕ್ಷಾ ಹಾಜರಾತಿಗೆ ಆದೇಶ:2025-26ನೇ ಸಾಲಿನ NMMS ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಕ್ರಮವಹಿಸುವ ಕುರಿತು ಪ್ರಮುಖ ಮಾಹಿತಿ.

ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ NMMS ಪರೀಕ್ಷೆಯನ್ನು ದಿನಾಂಕ:01.02.2026 ಭಾನುವಾರದಂದು ಕೆ.ಎಸ್.ಇ.ಎ.ಬಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ರಾಜ್ಯದ 591 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುತ್ತಿದೆ.

National Means-cum-Merit Scholarship- NMMS , Department of school Education & Literacy (DoSEL) ನವದೆಹಲಿ ರವರು ಮಾರ್ಗದರ್ಶನದಲ್ಲಿ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವುದು ಮತ್ತು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಶಾಲಾ ಹಂತದಲ್ಲಿ ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಸದರಿ ಪರೀಕ್ಷೆಗೆ ತಮ್ಮೆಲ್ಲರ ಪರಿಶ್ರಮದಿಂದ ರಾಜ್ಯ ಹಂತದಲ್ಲಿ 1,73,371 ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ನೊಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗದಂತೆ ತಪ್ಪದೇ ಹಾಜರಾಗಲು ಅಗತ್ಯ ಕ್ರಮವಹಿಸುವಂತೆ ಶಾಲಾ ಮುಖ್ಯಶಿಕ್ಷಕರು/ಪ್ರಾಂಶುಪಾಲರಿಗೆ, ಸಂಬಂಧಿಸಿದ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಮತ್ತು ಉಪನಿರ್ದೇಶಕರು(ಅಭಿವೃದ್ಧಿ) ರವರು ಸೂಕ್ತ ಕ್ರಮವಹಿಸುವಂತೆ ತಿಳಿಸಿದೆ.

ಮುಂದುವರೆದು, ಜಿಲ್ಲಾ ಹಾಗೂ ತಾಲ್ಲೂಕು ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪರೀಕ್ಷೆಯ ಗೌಪ್ಯತೆ ಮತ್ತು ಪಾವಿತ್ರ್ಯತೆಯನ್ನು ಕಾಪಾಡಿಕೊಂಡು ಪರೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲು ತಿಳಿಸಿದೆ.

NMMS Scholarship Exam 2025-26

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

You cannot copy content of this page

error: Content is protected !!
Scroll to Top