Gruha Lakshmi Scheme Update: ಜಿಎಸ್ಟಿ, ಆದಾಯ ತೆರಿಗೆ ಪಾವತಿ: 52,000 ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಇಲ್ಲ!
Gruha Lakshmi Scheme Update:ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುವ 52,000 ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗುವುದಿಲ್ಲ. ಸಂಪೂರ್ಣ ವಿವರ ಇಲ್ಲಿ ಓದಿ.
ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆಂದು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಸಿಗುತ್ತಿಲ್ಲ. ಈ ಪೈಕಿ 20 ಸಾವಿರ ಫಲಾನುಭವಿ ಗಳ ಸಮಸ್ಯೆ ಇತ್ಯರ್ಥ ಪಡಿಸಲಾಗಿದ್ದು ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಜಿಎಸ್ಟಿ ಹಾಗೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆಂದು ಸುಮಾರು 52 ಸಾವಿರ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುತ್ತಿಲ್ಲ. ಈ ಪೈಕಿ ಸುಮಾ ರು 20 ಸಾವಿರ ಫಲಾನುಭವಿಗಳ ಸಮಸ್ಯೆಯನ್ನು ಇತ್ಯರ್ಥ ಪಡಿಸ ಲಾಗಿದ್ದು, ಇನ್ನು ಉಳಿದವರ ಸಮಸ್ಯೆಯನ್ನು ಸರಿಪಡಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹೇಳಿದರು.
ಪಿ.ಎಚ್.ಪೂಜಾರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಜಿಎಸ್ಟಿ ಹಾಗೂ ಆದಾಯ ತೆರಿಗೆ ಇಲಾಖೆಗಳ ದಾಖಲೆಯಲ್ಲೂ ಇದೇ ರೀತಿ ತೋರಿಸುತ್ತಿದ್ದು, ಇದರಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ. ಸರ್ಕಾರದ ಹಾಗೂ ನಮ್ಮ ಇಲಾಖೆಯದ್ದು ಯಾವುದೇ ತಪ್ಪಿಲ್ಲ ಎಂದರು.
ರಾಜ್ಯದಲ್ಲಿ ಸುಮಾರು 1.26 ಕೋಟಿ ಫಲಾನುಭವಿಗಳಿದ್ದು ಕೆಲ ಫಲಾನುಭವಿಗಳು ಕೆಲವೊಂದು ವ್ಯವಹಾರ ನಡೆಸುವಾಗ ಜಿಎಸ್ ಟಿ, ಆದಾಯ ತೆರಿಗೆ ವ್ಯಾಪ್ತಿಗೆ ಒಳಪಟ್ಟಿರುತ್ತಾರೆ. ಗೃಹಲಕ್ಷ್ಮಿಗಾಗಿಯೇ ನಿರ್ಮಿಸಲಾಗಿರುವ ಸಾಫ್ಟ್ವೇರ್ನಲ್ಲಿ ಜಿಎಸ್ಟಿ, ಆದಾಯ ತೆರಿಗೆ ಅಂತ ತೋರಿಸಿದರೆ ಬದಲಾವಣೆ ಮಾಡಲು ಸಾಧ್ಯವಿಲ್ಲ ಎಂದರು.



