AI-Based Student Facial Attendance System: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ AI ಹಾಜರಾತಿ ವ್ಯವಸ್ಥೆ-2026
AI-Based Student Facial Attendance System:2025-26ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಘೋಷಣೆಯ ಕಂಡಿಕೆ-112ರಲ್ಲಿ ಈ ಕೆಳಕಂಡಂತೆ ಘೋಷಣೆ ಮಾಡಲಾಗಿದೆ.
“ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.”
ಮೇಲೆ ಓದಲಾದ ಕ್ರಮಾಂಕ (2) ರಲ್ಲಿ, ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲು ಲೆಕ್ಕ ಶೀರ್ಷಿಕೆ 4202-01-201-1-04- ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢಶಾಲೆಗಳಿಗೆ ಮೂಲಭೂತ ಸೌಕರ್ಯ (177-ಐಟಿ ವೆಚ್ಚ – 500.00 ಲಕ್ಷಗಳು) ಒಟ್ಟು- 500.00 ಲಕ್ಷಗಳನ್ನು ನಿಗದಿಪಡಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3) ರ ಸರ್ಕಾರಿ ಆದೇಶದಲ್ಲಿ 2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಕಂಡಿಕೆ -112 ರಲ್ಲಿ “ನಿರಂತರ” ಕಾರ್ಯಕ್ರಮದಡಿ Mobile-Based Al-Driven Facial Recognition Attendance System ತಂತ್ರಜ್ಞಾನದ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸುವ ವ್ಯವಸ್ಥೆಯನ್ನು 2025-26ನೇ ಶೈಕ್ಷಣಿಕ ಸಾಲಿನಿಂದಲೇ KTPP ನಿಯಮಗಳಂತೆ ಟೆಂಡರ್ ಆಹ್ವಾನಿಸಿ ಅನುಷ್ಠಾನ ಮಾಡಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಅನುಮತಿಸಿ ಆದೇಶಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ಮೇಲೆ ಓದಲಾದ ಕ್ರಮಾಂಕ (4)ರ ಸಭೆಯಲ್ಲಿ ಇ-ಆಡಳಿತ ಕೇಂದ್ರವೂ (CeG) ಈಗಾಗಲೇ ಎಲ್ಲಾ ಸರ್ಕಾರಿ ಸಿಬ್ಬಂದಿಗಳಿಗೆ ಎಐ ಆಧಾರಿತ ಹಾಜರಾತಿ ವ್ಯವಸ್ಥೆಯ ಅಭಿವೃದ್ಧಿ ಪಡಿಸಿದ್ದು, ಶಾಲಾ ಶಿಕ್ಷಣಯ ಇಲಾಖೆಯ ಅವ್ಯಕತೆಯ ಅನುಗುಣವಾಗಿ ಎಐ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಒದಗಿಸುವಂತೆ ಸೂಚಿಸಲಾಗಿತ್ತು. ಸದರಿ ಸಭೆಯಲ್ಲಿ ಎಐ ಆಧಾರಿತ ಹಾಜರಾತಿ ವ್ಯವಸ್ಥೆಗೆ ಸಂಬಂಧಿಸಿದ ಅಭಿವೃದ್ಧಿ ಚಟುವಟಿಕೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ವಿದ್ಯಾರ್ಥಿಗಳ ದತ್ತಾಂಶವನ್ನು ಇ-ಆಡಳಿತ ಕೇಂದ್ರದೊಂದಿಗೆ (CeG) ಹಂಚಿಕೊಳ್ಳುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರಿಗೆ ಸೂಚಿಸಲಾಯಿತು.
ಮೇಲೆ ಓದಲಾದ ಕ್ರಮಾಂಕ (5)ರಂತೆ, ಇ-ಆಡಳಿತ ಕೇಂದ್ರ (CeG) ರವರು ಶಾಲಾ ಶಿಕ್ಷಣ ಇಲಾಖೆಯ ಎ.ಐ. ಆಧಾರಿತ ವಿದ್ಯಾರ್ಥಿಗಳ ಮುಖ ಚಹರೆ ಹಾಜರಾತಿ ಮೇಲ್ವಿಚಾರಣಾ ಅಪ್ಲಿಕೇಶನ್ 6 ತಿಂಗಳ ಅಭಿವೃದ್ಧಿ ಹಾಗೂ 6 ತಿಂಗಳ ನಿರ್ವಹಣೆ ಮತ್ತು ಮೂಲಸೌಕರ್ಯ ವೆಚ್ಚ ಸೇರಿ ಒಂದು ವರ್ಷಕ್ಕೆ ರೂ.1,99,51,084/- ಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ ಮುಂದುವರೆದು, ಇ-ಆಡಳಿತ ಕೇಂದ್ರ (CeG) ರವರು ಶಾಲಾ ಶಿಕ್ಷಣ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎರಡನ್ನೂ ಒಳಗೊಂಡಂತೆ 15 ತಿಂಗಳಿಗೆ ರೂ. 2,16,87,232/- (ಜಿ.ಎಸ್.ಟಿ. ಒಳಗೊಂಡಂತೆ) ಗಳ ಪರಿಷ್ಕೃತ ಪ್ರಸ್ತಾವನೆಯನ್ನು ಈ ಕೆಳಗಿನಂತೆ ಸಲ್ಲಿಸಿದೆ.

ಮೇಲೆ ಓದಲಾದ ಕ್ರಮಾಂಕ (6)ರಲ್ಲಿ, ದಿನಾಂಕ: 12.12.2025 ರಂದು ಸುವರ್ಣ ಸೌಧ, ಬೆಳಗಾವಿ ಇಲ್ಲಿ ಪ್ರಧಾನ ಕಾರ್ಯದರ್ಶಿಗಳ, ಸಿ.ಆ.ಸು.ಇ (ಇ-ಆಡಳಿತ) ಇವರ ಅಧ್ಯಕ್ಷತೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಇಲಾಖೆಗಳ ಮುಖ್ಯಸ್ಥರೊಂದಿಗೆ ನಡೆದ ಸಭೆಯಲ್ಲಿ ಎಐ ಆಧಾರಿತ ವಿದ್ಯಾರ್ಥಿಗಳ ಹಾಜರಾತಿ ನಿರ್ವಹಣಾ ವ್ಯವಸ್ಥೆಯ ಅನುಷ್ಠಾನದ ಕುರಿತು ಕರ್ನಾಟಕ ಎಐ ಸೆಲ್, ಸಿಇಜಿ ಮತ್ತು ಖಾಸಗಿ ಮಾರಾಟಗಾರ (ರಿಸಾ) ಸಲ್ಲಿಸಿದ ಪ್ರಸ್ತಾವನೆಗಳನ್ನು ಕೂಲಂಕಷವಾಗಿ ಪರಿಶೀಲಿಸಲಾಗಿದ್ದು, ಸದರಿ ಸಭೆಯಲ್ಲಿ ಉತ್ತಮ ದತ್ತಾಂಶ ಆಡಳಿತದ ಜೊತೆಗೆ ಕರ್ನಾಟಕ ಎಐ ಸೆಲ್, ಸಿಇಜಿ ಇವರ ಪ್ರಸ್ತಾವನೆಯ ಮೂಲಕ ಸರ್ಕಾರವು ಸುಮಾರು 50% ರಷ್ಟು ಉಳಿತಾಯವನ್ನು ಸಾಧಿಸಬಹುದೆಂದು ಗಮನಿಸಲಾಯಿತು.
ಮೇಲೆ ಓದಲಾದ ಕ್ರಮಾಂಕ (7)ರಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ (TAP) ಸಭೆಯು ದಿನಾಂಕ: 06.01.2026 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ, ಸಿಇಜಿ ಅವರು, ಸಂಸ್ಥೆಯಲ್ಲಿಯೇ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಎಐ ಆಧಾರಿತ ವಿದ್ಯಾರ್ಥಿಗಳ ಮುಖ ಚಹರ ಹಾಜರಾತಿ ಮೇಲ್ವಿಚಾರಣಾ ಮೊಬೈಲ್ ಅಪ್ಲಿಕೇಶನ್ ನ ವಿನ್ಯಾಸ, ಅಭಿವೃದ್ಧಿ ಮತ್ತು ತಾಂತ್ರಿಕ ಅಂಶಗಳನ್ನು ಒಳಗೊಂಡ ವಿವರವಾದ ಪ್ರಸ್ತಾವನೆಯನ್ನು ಮಂಡಿಸಿದರು. ಸದರಿ ಪ್ರಸ್ತಾವನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಅಭಿವೃದ್ಧಿ ಮತ್ತು ಅನುಷ್ಠಾನಕ್ಕಾಗಿ ತಾಂತ್ರಿಕ ಸಲಹಾ ಸಮಿತಿ (TAP) ಪರಿಶೀಲಿಸಿ ಅನುಮೋದನೆ ನೀಡಿತು.
ಶಾಲಾ- ಕಾಲೇಜು ವಿದ್ಯಾರ್ಥಿಗಳ ಹಾಜರಾತಿ ಯನ್ನು Al-Based Student Facial Attendance Monitoring System ಮೊಬೈಲ್ ಅಪ್ಲಿಕೇಷನ್ ಮೂಲಕ ದಾಖಲಿಸುವ “ನಿರಂತರ’ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆ (Pilot) ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.
ಮೇಲ್ಕಂಡ ಪ್ರಸ್ತಾವನೆಯ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಇಪಿ 51 ಇಜಿಓವಿ 2005, ಬೆಂಗಳೂರು,ದಿನಾಂಕ:16-02-2026
“ನಿರಂತರ” ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಸರ್ಕಾರಿ ಹಾಗೂ ಅನುದಾನಿತ ಶಾಲಾ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು 2025-26ನೇ ಶೈಕ್ಷಣಿಕ ಸಾಲಿನಿಂದಲೇ ಜಾರಿಗೊಳಿಸುವ ಸಂಬಂಧ ದಿನಾಂಕ: 21.06.2025 ರಂದು ಹೊರಡಿಸಿದ್ದ ಸರ್ಕಾರದ ಆದೇಶವನ್ನು ಹಿಂಪಡೆಯಲಾಗಿದೆ.
ಈ ಸಂಬಂಧ 2025-26ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆಯವ್ಯಯ ಘೋಷಣೆ ಕಂಡಿಕೆ 112ರಂತೆ ರಾಜ್ಯದ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಜರಾತಿಯನ್ನು Al-Based Student Facial Attendance Monitoring System ಮೊಬೈಲ್ ಅಪ್ಲಿಕೇಷನ್ ಮೂಲಕ ದಾಖಲಿಸುವ “ನಿರಂತರ’ ಕಾರ್ಯಕ್ರಮವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಇ-ಆಡಳಿತ) ಇಲಾಖೆಯ ಇ-ಆಡಳಿತ ಕೇಂದ್ರದ ಮೂಲಕ ಈ ಕೆಳಕಂಡ ಕೋಷಕದ ವಿವರಗಳನ್ನಯ ಅಂದಾಜಿಸಿರುವ ಮೊತ್ತವಾದ ರೂ. 2,16,87,232 – (ತೆರಿಗೆ ಸೇರಿ) (ಎರಡು ಕೋಟಿ ಹದಿನಾರು ಲಕ್ಷದ ಎಂಬತ್ತೇಳು ಸಾವಿರದ ಇನ್ನೂರ ಮೂವತ್ತೆರಡು ರೂಪಾಯಿಗಳು ಮಾತ್ರ)ಗಳಲ್ಲಿ ಅಭಿವೃದ್ಧಿಪಡಿಸಿ, 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭದಿಂದಲೇ ಕಡ್ಡಾಯವಾಗಿ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲಾ ಕಾಲೇಜುಗಳಲ್ಲಿ ಅನುಷ್ಠಾನಗೊಳಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ ಹಾಗೂ ಧಾರವಾಡ ಮತ್ತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರಿಗೆ ಅನುಮತಿಸಿ ಆದೇಶಿಸಿದೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ ಹಾಗೂ ಧಾರವಾಡ ಮತ್ತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ಇವರು ಪಾಲಿಸಬೇಕಾದ ಷರತ್ತುಗಳು ಮತ್ತು ನಿಬಂಧನೆಗಳು:-
1. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅವರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ ಹಾಗೂ ಧಾರವಾಡ ಮತ್ತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ಇವರು ಸದರಿ ಯೋಜನೆಯ ಅನುಷ್ಠಾನಾಧಿಕಾರಿಗಳಾಗಿ ಕಾರ್ಯನಿರ್ವಹಿಸತಕ್ಕದ್ದು.
2.AI-Based Student Facial Attendance Monitoring ಸಿಸ್ಟಮ್ ಮೊಬೈಲ್ ಅಪ್ಲಿಕೇಶನ್ ಅನ್ನು ಶಾಲಾ ಶಿಕ್ಷಣ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಎರಡು ಇಲಾಖೆಗಳಲ್ಲಿನ 2026-27ನೇ ಶೈಕ್ಷಣಿಕ ಸಾಲಿನ ಪ್ರಾರಂಭದಿಂದಲೇ ಸರ್ಕಾರಿ ಹಾಗೂ ಅನುದಾನಿತ ಶಾಲಾ / ಕಾಲೇಜು ವಿದ್ಯಾರ್ಥಿಗಳಿಗೆ ಅನುಷ್ಠಾನಗೊಳಿಸತಕ್ಕದು.
3.ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರ್ಗಿ ಹಾಗೂ ಧಾರವಾಡ ಮತ್ತು ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, CeG ಹಾಗೂ ಯೋಜನಾ ನಿರ್ದೇಶಕರು, Al-ML, CeG ರವರೊಂದಿಗೆ ಸಮನ್ವಯಿಸಿ, ಯೋಜನೆಯ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸತಕ್ಕದ್ದು.
4.AI-Based Student Facial Attendance Monitoring System ಮೊಬೈಲ್ ಅಪ್ಲಿಕೇಶನ್ ಅನ್ನು ಮೇ- 2026ರ ಒಳಗೆ ಅಭಿವೃದ್ಧಿಪಡಿಸಿ, ಅನುಷ್ಠಾನಗೊಳಿಸಲು ಇ-ಆಡಳಿತ ಕೇಂದ್ರ ಇವರು ಅಗತ್ಯ ಕ್ರಮವಹಿಸತಕ್ಕದ್ದು.
5. ವಿದ್ಯಾರ್ಥಿಗಳ ಹಾಜರಾತಿಯನ್ನು ಎಲ್ಲಾ ರೀತಿಯ ಪರಿಸರಗಳಲ್ಲಿ (Low-Light Conditions) ಹಾಗೂ ಯಾವುದೇ ವಿದ್ಯಾರ್ಥಿಯ ಹಾಜರಾತಿಯು ತಪ್ಪದಂತೆ ಸೆರೆಹಿಡಿಯಲು ಅಪ್ಲಿಕೇಷನ್ ಅಭಿವೃದ್ಧಿಪಡಿಸಲು ಇ-ಆಡಳಿತ ಕೇಂದ್ರ ಕ್ರಮವಹಿಸತಕ್ಕದ್ದು.
6. ವಿದ್ಯಾರ್ಥಿಗಳ ನೋಂದಣಿಯನ್ನು SATS ತಂತ್ರಾಂಶದೊಂದಿಗೆ ಕಡ್ಡಾಯವಾಗಿ ದೃಢೀಕರಣ ಮಾಡತಕ್ಕದ್ದು, ಇದಕ್ಕೆ ಅವಶ್ಯಕವಿರುವ ದತ್ತಾಂಶವನ್ನು ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರು ಇ-ಆಡಳಿತ ಕೇಂದ್ರಕ್ಕೆ ಒದಗಿಸತಕ್ಕದು.
7. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜು ವಿದ್ಯಾರ್ಥಿಗಳ ಹಾಜರಾತಿಯನ್ನು AI-Based Student Facial Attendance Monitoring System ಮೊಬೈಲ್ ಅಪ್ಲಿಕೇಶನ್ ಮೂಲಕ ನೊಂದಣಿಯಾಗಿ, ಹಾಜರಾತಿಯನ್ನು ಸೆರೆಹಿಡಿಯಲು ಸಂಬಂಧಿಸಿದ ಸಂಸ್ಥೆಯ ಮುಖ್ಯಸ್ಥರು ನಿಯಮಾನುಸಾರ ಕ್ರಮವಹಿಸತಕ್ಕದ್ದು.
8.”ನಿರಂತರ” ಕಾರ್ಯಕ್ರಮದ ಅನುಷ್ಠಾನ ಸಂಬಂಧ ಜಿಲ್ಲಾ, ತಾಲ್ಲೂಕು ಹಂತದಮೇಲುಸ್ತುವಾರಿಯನ್ನು ಜಿಲ್ಲಾ ಉಪನಿರ್ದೇಶಕರು (ಅಭಿವೃದ್ಧಿ ಆಡಳಿತ ಮತ್ತು ಪದವಿ ಪೂರ್ವ) ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳು ರವರ ಮೂಲಕ ನಿರ್ವಹಿಸತಕ್ಕದ್ದು. ಇದಕ್ಕಾಗಿ ವಿವರವಾದ ಸುತ್ತೋಲೆಯನ್ನು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಹೊರಡಿಸತಕ್ಕದ್ದು.
9. “ನಿರಂತರ” ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯ ಜಿಲ್ಲಾ ಹಾಗೂ ತಾಲ್ಲೂಕು ಹಂತದಲ್ಲಿ ಪ್ರಾಥಮಿಕ / ಪ್ರೌಢಶಾಲೆಗಳ / ಪದವಿಪೂರ್ವ ಕಾಲೇಜುಗಳ ಶಿಕ್ಷಕರು /ಉಪನ್ಯಾಸಕರು /ಮುಖ್ಯ ಶಿಕ್ಷಕರು / ಪ್ರಾಂಶುಪಾಲರು, BRP, CRP ಹಾಗೂ ECO ರವರಿಗೆ ಅಗತ್ಯ ತರಬೇತಿಯನ್ನು ಆನ್ಲೈನ್ ಮೂಲಕ ಒದಗಿಸಲು ಅನುಷ್ಠಾನಾಧಿಕಾರಿಗಳು ಅಗತ್ಯ ಕ್ರಮವಹಿಸತಕ್ಕದ್ದು. ಇದಕ್ಕೆ ಇ-ಆಡಳಿತ ಕೇಂದ್ರ ಎಲ್ಲಾ ರೀತಿಯ ಸಹಕಾರ ನೀಡತಕ್ಕದು. ಸದರಿ ತರಬೇತಿಯು 2026ನೇ ಸಾಲಿನ ಏಪ್ರಿಲ್ ಹಾಗೂ ಮೇ ಮಾಹೆಯಲ್ಲಿಯೇ ಮುಕ್ತಾಯಗೊಳಿಸತಕ್ಕದ್ದು,
10. ಸದರಿ ಕಾರ್ಯಕ್ರಮಕ್ಕೆ ಹಾಗೂ ಯೋಜನಾ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮವಹಿಸತಕ್ಕದ್ದು.
11. ಸದರಿ ಕಾರ್ಯಕ್ರಮದಲ್ಲಿ ದೈನಂದಿನ ಮಕ್ಕಳ ಹಾಜರಾತಿಯನ್ನು SATS ತಂತ್ರಾಂಶದೊಂದಿಗೆ ಸಂಯೋಜಿಸಿ, SATS ತಂತ್ರಾಂಶದಲ್ಲಿ ಪ್ರದರ್ಶನಗೊಳ್ಳುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಅಗತ್ಯ ಕ್ರಮವಹಿಸತಕ್ಕದ್ದು
12. ಸಮಗ್ರ ಹಾಜರಾತಿ ವರದಿಗಳನ್ನು ಬಳಸಿ ಹಾಜರಾತಿ ಕಡಿಮೆಯಿರುವ ಶಾಲಾ / ಕಾಲೇಜು ಅಥವಾ ವಲಯಗಳನ್ನು ಗುರುತಿಸಲು ಹಾಗೂ ಶೈಕ್ಷಣಿಕ ವಿಶ್ಲೇಷಣೆಯನ್ನು ಕೈಗೊಂಡು ಶೈಕ್ಷಣಿಕ ವ್ಯವಸ್ಥೆಯ ಉತ್ತಮ ದತ್ತಾಂಶ ವಿಶ್ಲೇಷಣೆಗೆ ಬಳಸಲು ಇಲಾಖಾ ಮುಖ್ಯಸ್ಥರು ಅಗತ್ಯ ಕ್ರಮವಹಿಸತಕ್ಕದ್ದು.
13. ವಿವಿಧ ಪ್ರೋತ್ಸಾಹದಾಯಕ ಯೋಜನೆಗಳ ಅನುಷ್ಠಾನಕ್ಕೆ ನಿಖರ ಮಾಹಿತಿಯನ್ನು ಲಭ್ಯವಾಗಿಸಿ, ಅನುದಾನ ಸೋರಿಕೆಯನ್ನು ತಡೆಗಟ್ಟಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಇವರು ಅಗತ್ಯ ಕ್ರಮವಹಿಸತಕ್ಕದ್ದು.
14. ಶಾಲಾ / ಕಾಲೇಜಿಗೆ ಗೈರುಹಾಜರಾಗುವ ವಿದ್ಯಾರ್ಥಿಗಳನ್ನು ಟ್ರ್ಯಾಕ್ ಮಾಡಲು ಹಾಗೂ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯದಂತೆ ಸದರಿ ತಂತ್ರಾಂಶದ ನೆರವಿನಿಂದ ಕ್ರಮವಹಿಸತಕ್ಕದ್ದು.
15. Al-Based Student Facial Attendance Monitoring ಸಿಸ್ಟಮ್ ಮೊಬೈಲ್ ಅಪ್ಲಿಕೇಶನ್ಮೂಲಕ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ದಿನನಿತ್ಯ ದಾಖಲಿಸಲಾಗುವ ಹಾಜರಾತಿ ವಿವರಗಳು SATS ತಂತ್ರತಾಂಶದ ಮೂಲಕ ಸಾರ್ವಜನಿಕ ವೀಕ್ಷಣೆಗೆ ಲಭ್ಯವಾಗಿರತಕ್ಕದ್ದು.
16. “ನಿರಂತರ” ಕಾರ್ಯಕ್ರಮದ ಆದೇಶದ ಪ್ರತಿಯನ್ನು ಇಲಾಖೆಗಳ ಜಾಲತಾಣದಲ್ಲಿ ಪ್ರಕಟಿಸತಕ್ಕದ್ದು.
17. ಸದರಿ ಕಾರ್ಯಕ್ರಮದ ಪ್ರಗತಿಯ ವರದಿಯನ್ನು ಪ್ರತಿ ತಿಂಗಳು ಸರ್ಕಾರಕ್ಕೆ ಸಲ್ಲಿಸತಕ್ಕದ್ದು.
18. ವಿವಿಧ ಪ್ರೋತ್ಸಾಹಕ ವಿದ್ಯಾರ್ಥಿಗಳ ಯೋಜನೆಗಳಿಗೆ ಮಕ್ಕಳ ದಾಖಲಾತಿಯನ್ನು ಹೆಚ್ಚಾಗಿ ತೋರಿಸುವುದನ್ನು ಕಾನೂನು ಬಾಹಿರ ಕೃತ್ಯ ಎಂದು ಪರಿಗಣಿಸಲಾಗುವುದು.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 493 ವೆಚ್ಚ-8/2025, ದಿನಾಂಕ:17.06.2025ರಲ್ಲಿ ನೀಡಿರುವ ಸಹಮತಿ ಮೇರೆಗೆ ಮತ್ತು ಸರ್ಕಾರದ ಆದೇಶ ಸಂಖ್ಯೆ:FD 04 TFC 2025, ದಿನಾಂಕ: 01.01.2026ರಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.



