BREAKING: NEET 2027 Goes Online! No More OMR Sheets, Announces Dharmendra Pradhan

BREAKING: NEET 2027 Goes Online! No More OMR Sheets, Announces Dharmendra Pradhan

 

BREAKING: ವೈದ್ಯಕೀಯ ಶಿಕ್ಷಣ ಪ್ರವೇಶಕ್ಕೆ ನಡೆಯುವ ಪ್ರಮುಖ ಪರೀಕ್ಷೆಯಾದ ನೀಟ್ (NEET UG) ನಲ್ಲಿ ಮುಂದಿನ ವರ್ಷದಿಂದ ದೊಡ್ಡ ಬದಲಾವಣೆ ಆಗಲಿದೆ. ಕೇಂದ್ರ ಶಿಕ್ಷಣ ಸಚಿವ Dharmendra Pradhan ಅವರು ಶುಕ್ರವಾರ ಮಹತ್ವದ ಘೋಷಣೆ ಮಾಡಿದ್ದು, ಇನ್ನು ಮುಂದೆ ನೀಟ್ ಪರೀಕ್ಷೆಯನ್ನು ಸಂಪೂರ್ಣವಾಗಿ ಆನ್‌ಲೈನ್ (Computer Based Test) ಮೂಲಕ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇದುವರೆಗೆ ಇದ್ದಂತೆ ಪೆನ್ ಮತ್ತು ಪೇಪರ್ ಬಳಸಿ ಒಎಂಆರ್ ಶೀಟ್ ತುಂಬುವ ಪದ್ಧತಿ ಇರಲ್ಲ. ಅಭ್ಯರ್ಥಿಗಳು ಕಂಪ್ಯೂಟರ್ ಮೂಲಕವೇ ಪರೀಕ್ಷೆ ಬರೆಯಬೇಕಾಗುತ್ತದೆ.

2026ರಲ್ಲಿ ನಡೆದ ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿದ್ದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದರು. ಇಂತಹ ಅಕ್ರಮಗಳನ್ನು ತಡೆಯಲು ಸರ್ಕಾರ ಈ ಹೊಸ ಡಿಜಿಟಲ್ ಕ್ರಮ ಕೈಗೊಂಡಿದೆ.

ಆನ್‌ಲೈನ್ ಪರೀಕ್ಷೆಯಿಂದ ಪರೀಕ್ಷಾ ಪ್ರಕ್ರಿಯೆ ಇನ್ನಷ್ಟು ಪಾರದರ್ಶಕವಾಗಲಿದ್ದು, ಅಕ್ರಮಗಳಿಗೆ ಕಡಿವಾಣ ಬೀಳಲಿದೆ ಎಂದು ಸಚಿವರು ಹೇಳಿದ್ದಾರೆ.

ಮುಂದಿನ ವರ್ಷದ ಪರೀಕ್ಷೆಯ ದಿನಾಂಕ ಹಾಗೂ ಇತರ ಮಾಹಿತಿಗಳನ್ನು ಶೀಘ್ರದಲ್ಲೇ National Testing Agency (NTA) ಪ್ರಕಟಿಸಲಿದೆ.

 

CLICK HERE MORE INFORMATION

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Author: mastermitra

Leave a Reply

Your email address will not be published. Required fields are marked *