India Post Recruitment 2026: 28,740 ಅಂಚೆ ಸೇವಕ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ.
India Post Recruitment 2026:ರಾಜ್ಯಕ್ಕೆ 1,135 ಹುದ್ದೆಗಳು ಮೀಸಲಾಗಿದ್ದು, ಎಸ್ಸೆಸ್ಸೆಲ್ಸಿ ವಿದ್ಯಾರ್ಹತೆಯೊಂದಿಗೆ ಅರ್ಜಿ ಸಲ್ಲಿಸಲು ಅವಕಾಶ. ಅರ್ಜಿ ಸಲ್ಲಿಕೆಯ ಕೊನೆ ದಿನ ಫೆಬ್ರವರಿ 14. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹10,000 ರಿಂದ ₹29,380 ವರೆಗೆ ವೇತನ,ಆನ್ಲೈನ್ ಮೂಲಕ ಅರ್ಜಿ ಅಹ್ವಾನ.
ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗ ಕನಸು ಇದೆಯಾ? 28,740 ಗ್ರಾಮೀಣ ಡಾಕ್ ಸೇವಕ ಹುದ್ದೆಗಳ ಭರ್ಜರಿ ನೇಮಕಾತಿ ಪ್ರಕಟ!
ಭಾರತೀಯ ಅಂಚೆ ಇಲಾಖೆಯಲ್ಲಿ ಕೆಲಸ ಮಾಡಬೇಕೆನ್ನುವ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶ. ದೇಶದಾದ್ಯಂತ ವಿವಿಧ ಅಂಚೆ ವೃತ್ತಗಳಲ್ಲಿ ಖಾಲಿ ಇರುವ 28,740 ಗ್ರಾಮೀಣ ಡಾಕ್ ಸೇವಕ (GDS) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.
ಈ ನೇಮಕಾತಿಯಲ್ಲಿ ಬ್ರಾಂಚ್ ಪೋಸ್ಟ್ ಮಾಸ್ಟರ್ (BPM) ಹಾಗೂ ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ (ABPM) ಹುದ್ದೆಗಳು ಒಳಗೊಂಡಿವೆ. ವಿಶೇಷವಾಗಿ ಕರ್ನಾಟಕ ರಾಜ್ಯಕ್ಕೆ 1,135 ಹುದ್ದೆಗಳನ್ನು ಮೀಸಲಿಡಲಾಗಿದೆ.
ಶೈಕ್ಷಣಿಕ ಅರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕು:
▪️ಎಸ್ಸೆಸ್ಸೆಲ್ಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ
▪️ಎಸ್ಸೆಸ್ಸೆಲ್ಸಿಯಲ್ಲಿ ಗಣಿತ ಮತ್ತು ಇಂಗ್ಲಿಷ್ ವಿಷಯಗಳು ಕಡ್ಡಾಯ
▪️ಆಯಾ ರಾಜ್ಯದ ಸ್ಥಳೀಯ ಭಾಷೆಯಲ್ಲಿ ವಿದ್ಯಾಭ್ಯಾಸ ಮಾಡಿರಬೇಕು
▪️ಕರ್ನಾಟಕ ಅಭ್ಯರ್ಥಿಗಳು ಕನ್ನಡದಲ್ಲಿ ವ್ಯಾಸಂಗ ಮಾಡಿರಬೇಕು
▪️ಸೈಕ್ಲಿಂಗ್ ಅಥವಾ ದ್ವಿಚಕ್ರ ವಾಹನ ಚಾಲನೆ ತಿಳಿದಿರಬೇಕು
ವಯೋಮಿತಿ:
ಕನಿಷ್ಠ ವಯಸ್ಸು: 18 ವರ್ಷ
ಗರಿಷ್ಠ ವಯಸ್ಸು: 40 ವರ್ಷ
ವಯೋಮಿತಿ ಸಡಿಲಿಕೆ:
▪️ಒಬಿಸಿ ಅಭ್ಯರ್ಥಿಗಳಿಗೆ: 3 ವರ್ಷ
▪️ಎಸ್ಸಿ / ಎಸ್ಟಿ ಅಭ್ಯರ್ಥಿಗಳಿಗೆ: 5 ವರ್ಷ
ಅರ್ಜಿ ಶುಲ್ಕ:
ಸಾಮಾನ್ಯ / OBC / EWS ಅಭ್ಯರ್ಥಿಗಳಿಗೆ: ₹100
ಶುಲ್ಕ ವಿನಾಯಿತಿ:
▪️ಮಹಿಳಾ ಅಭ್ಯರ್ಥಿಗಳು
▪️ವಿಶೇಷಚೇತನ ಅಭ್ಯರ್ಥಿಗಳು
▪️ತೃತೀಯ ಲಿಂಗಿಗಳು
▪️ಎಸ್ಸಿ / ಎಸ್ಟಿ ಅಭ್ಯರ್ಥಿಗಳು
▪️ಒಮ್ಮೆ ಪಾವತಿಸಿದ ಶುಲ್ಕವನ್ನು ಹಿಂತಿರುಗಿಸುವುದಿಲ್ಲ ಅಥವಾ ಬೇರೆ ನೇಮಕಾತಿಗೆ ಬಳಸಲಾಗುವುದಿಲ್ಲ.
ಆಯ್ಕೆ ಪ್ರಕ್ರಿಯೆ ಹೇಗೆ?
▪️ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ
▪️ಯಾವುದೇ ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇಲ್ಲ
▪️ಅಂಕಗಳು ಸಮಾನವಾಗಿದ್ದರೆ ವಯಸ್ಸಿನ ಹಿರಿತನದ ಆಧಾರದಲ್ಲಿ ಆಯ್ಕೆ
▪️ಹೆಚ್ಚಿನ ವಿದ್ಯಾರ್ಹತೆ ಇದ್ದರೂ SSLC ಅಂಕಗಳನ್ನಷ್ಟೇ ಪರಿಗಣಿಸಲಾಗುತ್ತದೆ
▪️ಆಯ್ಕೆ ಸಂಬಂಧಿತ ಮಾಹಿತಿಯನ್ನು SMS ಮೂಲಕ ಅಭ್ಯರ್ಥಿಗಳಿಗೆ ತಿಳಿಸಲಾಗುತ್ತದೆ
ಅಭ್ಯರ್ಥಿಗಳು ಗಮನಿಸಬೇಕಾದ ಮುಖ್ಯ ಅಂಶಗಳು:
▪️ ಯಾವುದೇ ಉದ್ಯೋಗ ಪೂರ್ವ ಸೇವಾನುಭವವನ್ನು ಪರಿಗಣಿಸಲಾಗುವುದಿಲ್ಲ
▪️ ಒಬ್ಬ ಅಭ್ಯರ್ಥಿಗೆ ಒಂದು ಬಾರಿ ಮಾತ್ರ ನೋಂದಣಿ ಅವಕಾಶ
▪️ ಎಲ್ಲಾ ವೃತ್ತಗಳಿಗೆ ಒಂದೇ ನೋಂದಣಿ ಸಂಖ್ಯೆಯನ್ನು ಬಳಸಬೇಕು
▪️ ನೋಂದಣಿಯ ವೇಳೆ ಮೊಬೈಲ್ ಸಂಖ್ಯೆ ಕಡ್ಡಾಯ
▪️ ರಾಜ್ಯದ ಜಿಲ್ಲಾವಾರು, ವೃತ್ತವಾರು ಹುದ್ದೆಗಳ ವಿವರಗಳು ಅಧಿಸೂಚನೆಯಲ್ಲಿ ಲಭ್ಯ
▪️ ಹುದ್ದೆಗಳ ವಿವರಗಳನ್ನು ಪರಿಶೀಲಿಸಿ ಮಾತ್ರ ಅರ್ಜಿ ಸಲ್ಲಿಸಿ
ಕೊನೆಯ ಮಾತು:
ಕಡಿಮೆ ಅರ್ಹತೆಯಲ್ಲಿ, ಯಾವುದೇ ಪರೀಕ್ಷೆ ಇಲ್ಲದೆ ಸರ್ಕಾರಿ ಉದ್ಯೋಗ ಪಡೆಯುವ ಉತ್ತಮ ಅವಕಾಶ ಇದಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದ ಮೊದಲು ಅರ್ಜಿ ಸಲ್ಲಿಸಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ.
ಮಹತ್ವದ ದಿನಾಂಕಗಳು:
▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 14, 2026
▪️ಅರ್ಜಿ ತಿದ್ದುಪಡಿಗೆ ಅವಕಾಶ: ಫೆ.18-19, 2026
▪️ಅರ್ಜಿ ಶುಲ್ಕ: ಫೆಬ್ರವರಿ 16, 2026
▪️ವೇತನ ವಿವರ: ₹10,000- ₹29,380



