Karnataka School Education Department:ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅನುಮತಿ

Karnataka School Education Department:ಖಾಲಿ ಹುದ್ದೆಗಳ ಭರ್ತಿಗೆ ಅಧಿಕೃತ ಅನುಮತಿ

Karnataka School Education Department:ಕರ್ನಾಟಕ ಸರ್ಕಾರವು 2026–27ರ ಬಜೆಟ್ ಘೋಷಣೆಯಂತೆ ಸರ್ಕಾರಿ ಶಾಲೆಗಳ ಖಾಲಿ ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಅನುಮೋದನೆ ನೀಡಿದೆ. ನೇಮಕಾತಿ ಕುರಿತ ಸಂಪೂರ್ಣ ವಿವರ ಇಲ್ಲಿದೆ.

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ: (1)ರ 2026-27ನೇ ಸಾಲಿನ ಆಯವ್ಯಯ ಭಾಷಣದ

ಕಂಡಿಕೆ-115 ರಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಈ ಕೆಳಕಂಡಂತೆ ಘೋಷಿಸಲಾಗಿರುತ್ತದೆ:

“2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು”

ಮೇಲೆ ಓದಲಾದ ಕ್ರಮಾಂಕ: (2)ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಶಾಲಾ

ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ: (3)ರಲ್ಲಿ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು ಕಲ್ಯಾಣ ಕರ್ನಾಟಕ ಭಾಗದ ರಿಕ್ತ ಹುದ್ದೆಗಳನ್ನು ಭರ್ತಿ ಮಾಡಲು ಮಂಜೂರಾಗಿರುವ ಶೇ 80 ರಷ್ಟು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಭಾಗದ ಪ್ರಾಥಮಿಕ ಶಾಲೆಗಳಲ್ಲಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕವಿರುವ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಮಂಜೂರಾತಿ ನೀಡುವ ಕುರಿತು ವಿವಿಧ ವರ್ಗದ ಶಿಕ್ಷಕರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡುವ ಕುರಿತು ಪ್ರಸ್ತಾವನೆ ಸಲ್ಲಿಸಿರುತ್ತಾರೆ.

2026-27ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-115ರ ಘೋಷಣೆಯಂತೆ ಹಾಗೂ ಆಯುಕ್ತರು ಸಲ್ಲಿಸಿರುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರವು ತೀರ್ಮಾನಿಸಿದೆ. ಅದರಂತೆ ಈ ಕೆಳಕಂಡ ಆದೇಶ.

ಸರ್ಕಾರದ ಆದೇಶ ಸಂಖ್ಯೆ: EP 53 DPI,2026, ಬೆಂಗಳೂರು ದಿನಾಂಕ: 14.07.2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದದ ಶಿಕ್ಷಕರ ಹುದ್ದೆಗಳನ್ನು ಈ ಕೆಳಕಂಡಂತೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದ ಅನುಮೋದನೆ ನೀಡಿ ಆದೇಶಿಸಿದೆ.

 

 

ಕಲ್ಯಾಣ ಕರ್ನಾಟಕ ಪ್ರದೇಶ (Kalyana Karnataka)

ಕ್ರ. ಸಂ. ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
1 Graduate Primary Teacher (GPT) 3228
2 Assistant Master (AM) 2214
3 Primary School Teacher (PST) 800
4 Physical Education Teacher (PET) 425
5 Computer Science Teacher (CST) 300
ಒಟ್ಟು 6967

ಕಲ್ಯಾಣ ಕರ್ನಾಟಕ ಪ್ರದೇಶ ಹೊರತುಪಡಿಸಿದ ಭಾಗಗಳಲ್ಲಿ (Non Kalyana Karnataka)

ಕ್ರ. ಸಂ. ಹುದ್ದೆಗಳ ವಿವರ ಹುದ್ದೆಗಳ ಸಂಖ್ಯೆ
1 Graduate Primary Teacher (GPT) 5272
2 Assistant Master (AM) 2286
3 Primary School Teacher (PST) 100
4 Physical Education Teacher (PET) 175
5 Computer Science Teacher (CST) 200
ಒಟ್ಟು 8033

 

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ: ಆಇ 390 ವೆಚ್ಚ-8/2026, ದಿನಾಂಕ: 08.06.2026ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಲಾಗಿದೆ.

Karnataka school education

CLICK HERE MORE INFORMATION 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!