KREIS-2026: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಒಳಮೀಸಲಾತಿ RD ಸಂಖ್ಯೆ ಸಲ್ಲಿಕೆ ಸೂಚನೆ

KREIS-2026: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಒಳಮೀಸಲಾತಿ RD ಸಂಖ್ಯೆ ಸಲ್ಲಿಕೆ ಸೂಚನೆ

 

KREIS-2026: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಒಳಮೀಸಲಾತಿ RD ಸಂಖ್ಯೆ ಸಲ್ಲಿಕೆ ಸೂಚನೆ ನೀಡಲಾಗಿದೆ.

2026-27ನೇ ಸಾಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಗಮನಕ್ಕೆ (ಒಳಮೀಸಲಾತಿ ವಿವರ ಇರುವ ಆ‌ರ್.ಡಿ ಸಂಖ್ಯೆಯನ್ನು 30-03-2026ರೊಳಗೆ ನಮೂದಿಸುವ ಕುರಿತು)

KRIES -2026ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಒಳಮೀಸಲಾತಿಯನ್ನು ಕಲ್ಪಿಸಿ ಪ್ರವರ್ಗ-ಎ ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಣ ಮಾಡಿರುವ ಕಾರಣದಿಂದ KRIES-2026ಕ್ಕೆ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳ ಒಳಮೀಸಲಾತಿ ಜಾತಿ ಪ್ರಮಾಣ ಪತ್ರವನ್ನು ಸಂಬಂಧಿಸಿದ ತಹಶೀಲ್ದಾರ್ ರವರಿಂದ ಪಡೆದ ಸದರಿ ಪ್ರಮಾಣ ಪತ್ರದ ಆ‌ರ್.ಡಿ ಸಂಖ್ಯೆಯನ್ನು ಆನ್ ಲೈನ್ ಅರ್ಜಿಯಲ್ಲಿ ನಮೂದಿಸಲು ಈಗಾಗಲೇ ಸೂಚಿಸಲಾಗಿದೆ.

ಈ ಅಂಶಗಳ ಹಿನ್ನಲೆಯಲ್ಲಿ ಸರ್ಕಾರದ ಆದೇಶ ಸಂಖ್ಯೆ : ಸಕಇ 08 ಎಸ್. ಎಲ್. ಪಿ 2024 ಬೆಂಗಳೂರು ದಿನಾಂಕ 25-07-2025ರ ಒಳಮೀಸಲಾತಿ ಆದೇಶದನುಸಾರ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಣ ಮಾಡಿದ ಪ್ರಮಾಣ ಪತ್ರದ ಆ‌ರ್.ಡಿ ಸಂಖ್ಯೆಯನ್ನು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ, ಕೆ.ಇ.ಎ ಪೋರ್ಟ್ ಲ್ ನಲ್ಲಿ ನಮೂದಿಸಲು ದಿನಾಂಕ 30-03-2026ರವರೆಗೆ ಅವಕಾಶ ನೀಡಲಾಗಿದೆ.

KRIES-2026: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ (KRIES-2026ಕ್ಕೆ) ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಭೇಟಿ ನೀಡಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆಯನ್ನು ಕೆಇಎ ಪೋರ್ಟಲ್ ನಲ್ಲಿ ನಮೂದಿಸಲು ಮಾರ್ಚ್ 30ರವರೆಗೆ ಅವಕಾಶ ನೀಡಲಾಗಿದೆ.

ವಿದ್ಯಾರ್ಥಿಗಳು ಸಂಬಂಧಿಸಿದ ತಹಶೀಲ್ದಾರರಿಂದ ಪಡೆದ ವರ್ಗೀಕರಿಸಿದ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ ನಮೂದಿಸುವುದನ್ನು ಒಳಮೀಸಲಾತಿ ಆದೇಶಾನುಸಾರ ಕಡ್ಡಾಯಗೊಳಿಸಲಾಗಿದೆ. ಇದುವರೆಗೂ ಯಾರು ಒಳ ಮೀಸಲಾತಿ ಪ್ರಕಾರ ಪ್ರವರ್ಗಗಳನ್ನು ನಮೂದಿಸಿಲ್ಲವೊ‌ ಅಂತಹವರು ಅರ್ಜಿ ಸಲ್ಲಿಸಿದ ಶಾಲೆಗಳಿಗೆ ಹೋಗಿ RD ಸಂಖ್ಯೆ ನಮೂದಿಸಲು ಕೋರಲಾಗಿದೆ.

-ಇಸ್ಲಾವುದ್ದೀನ್ ಗದ್ಯಾಳ, ಆಡಳಿತಾಧಿಕಾರಿ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ

KREIS

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

You cannot copy content of this page

error: Content is protected !!
Scroll to Top