NHK Various Departments Recruitment 2025: ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ

NHK Various Departments Recruitment 2025: ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ

 

NHK Various Departments Recruitment 2025: ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟ:

NHK Various Departments Recruitment 2025 ಅಡಿಯಲ್ಲಿ ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗಿದೆ. ಫಲಿತಾಂಶ, ಮುಂದಿನ ಹಂತಗಳ ಮಾಹಿತಿ ಇಲ್ಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ವಿವಿಧ ಇಲಾಖೆ/ಮಂಡಳಿ/ನಿಗಮ/ಸಂಸ್ಥೆಗಳಲ್ಲಿನ ಉಳಿಕೆ ಮೂಲ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ದಿನಾಂಕ 25.01.2026 ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ದಿನಾಂಕ 27.01.2026 ರಂದು ಪ್ರಕಟಿಸಲಾಗಿರುತ್ತದೆ.

ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನೀಡಲಾದ ಲಿಂಕ್ ಮೂಲಕ ದಿನಾಂಕ 29.01.2026 ವರೆಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯು ನೀಡಿದ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 30.01.2026 ರಂದು ಪ್ರಕಟಿಸಲಾಗಿರುತ್ತದೆ.

ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 02.02.2026 ಬೆಳಿಗ್ಗೆ  11-30 ರೊಳಗೆ ನಿಗದಿತ ಲಿಂಕ್ https://cetonline.karnataka.gov.in/kea/ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು. ಪೂರಕ ದಾಖಲೆಗಳಿಲ್ಲದ ಹಾಗೂ ಕೀ ಉತ್ತರಗಳಿಗೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಈ ಹಂತದಲ್ಲಿ ಪರಿಗಣಿಸಲಾಗುವುದಿಲ್ಲ.ಎಂದು ತಿಳಿಸಲಾಗಿದೆ.

NHK Various

 

CLICK HERE TO CHECK RESULT

CLICK HERE TO OBJECTION LINK

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

You cannot copy content of this page

error: Content is protected !!
Scroll to Top