NMMS EXAM-2026- Model Key Answers
NMMS (National Means-cum-Merit Scholarship) ಎಂಬುದು ಕೇಂದ್ರ ಸರ್ಕಾರದ ಮಹತ್ವದ ವಿದ್ಯಾರ್ಥಿವೇತನ ಯೋಜನೆ. ಆರ್ಥಿಕವಾಗಿ ಹಿಂದುಳಿದ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಸಹಾಯ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ.
2025-26ನೇ ಸಾಲಿನಲ್ಲಿ ನ್ಯಾಷನಲ್ ಮೀನ್ಸ್-ಕಮ್ ಮೆರಿಟ್ ವಿದ್ಯಾರ್ಥಿವೇತನ (National Means-cum-Merit Scholarship- NMMS) ಪರೀಕ್ಷೆಯನ್ನು Department of School Education & Literacy ನವದೆಹಲಿ ರವರ ಮಾರ್ಗಸೂಚಿಯಂತೆ ನಡೆಸಲು Online ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವುದು, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳು ಮಾಧ್ಯಮಿಕ ಶಾಲಾ ಹಂತದಲ್ಲಿ ಶಾಲೆಯಿಂದ ಹೊರಗುಳಿಯದಂತೆ ತಡೆಯುವುದು ಮತ್ತು ಅವರ ವಿದ್ಯಾಭ್ಯಾಸದ ಮುಂದುವರಿಕೆಗೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ಸದರಿ ಪರೀಕ್ಷೆಯನ್ನು ಕನ್ನಡ, ಇಂಗ್ಲೀಷ್, ಉರ್ದು, ಮರಾಠಿ ಮತ್ತು ತೆಲುಗು ಮಾಧ್ಯಮಗಳಲ್ಲಿ ನಡೆಸುತ್ತಿದ್ದು, ಈ ಪರೀಕ್ಷೆಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಇಂದು ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
ಪತ್ರಿಕೆ-01 ಮಾನಸಿಕ ಸಾಮರ್ಥ್ಯ ಪರೀಕ್ಷೆ Mental Ability Test (MAT) ಮತ್ತು ಪತ್ರಿಕೆ-02 ವ್ಯಾಸಂಗಿಕ ಪ್ರವೃತ್ತಿ ಪರೀಕ್ಷೆ Scholastic Aptitude Test (SAT) ಎರಡು ಭಾಗಗಳಲ್ಲಿ ನಡೆಯುತ್ತದೆ.
ಇಲ್ಲಿ ನೀಡಲಾದ ಉತ್ತರಗಳು ಕೇವಲ ಮಾದರಿ ಉತ್ತರಗಳಾಗಿವೆ.

DOWNLOAD MODEL KEY ANSWERS
▪️ PAPER-01: Mental Ability Test (MAT)- CLICK HERE
▪️ PAPER -02: Scholastic Aptitude Test (SAT)- CLICK HERE


