School and College Students Free Bus Pass-2026: ಉಚಿತ ಬಸ್ ಪಾಸ್ ಯೋಜನೆಗೆ ರಾಜ್ಯ ಸರ್ಕಾರದ ಅನುಮೋದನೆ

School and College Students Free Bus Pass-2026: ಉಚಿತ ಬಸ್ ಪಾಸ್ ಯೋಜನೆಗೆ ರಾಜ್ಯ ಸರ್ಕಾರದ ಅನುಮೋದನೆ

School and College Students Free Bus Pass-2026: ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಸರ್ಕಾರದ ಆದೇಶದಲ್ಲಿ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಲು ಸಚಿವ ಸಂಪುಟದ ಅನುಮೋದನೆಯನ್ವಯ ತಾತ್ವಿಕ ಅನುಮೋದನೆ ನೀಡಿ ಆದೇಶಿಸಿದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಪತ್ರದಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇವರು ಪ್ರಸ್ತಾವನೆ ಸಲ್ಲಿಸುತ್ತಾ, ಪ್ರಸ್ತುತ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಹಾಲಿ ಇರುವ ನಿಯಮಾವಳಿಗಳನ್ನು ಅನುಸರಿಸಿ ಸೇವಾಸಿಂಧು ತಂತ್ರಾಂಶದ ಮುಖೇನ ಅರ್ಜಿಗಳನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಬಸ್ ಪಾಸುಗಳನ್ನು ವಿತರಿಸಲಾಗುತ್ತಿದ್ದು, ಪ್ರಸ್ತುತ, ಚಾಲ್ತಿಯಲ್ಲಿರುವ ನಿಯಮಾವಳಿಗಳನ್ನಯ ಸಾಮಾನ್ಯ ವಿದ್ಯಾರ್ಥಿ ಪಾಸುಗಳ ಒಟ್ಟಾರೆ ವೆಚ್ಚದಲ್ಲಿ ಶೇ.50 ರಷ್ಟು ಸರ್ಕಾರ, ಶೇ.25 ರಷ್ಟು ನಿಗಮಗಳು ಹಾಗೂ ಶೇ.25 ರಷ್ಟನ್ನು ಫಲಾನುಭವಿಗಳು ಭರಿಸಲು ಕ್ರಮವಹಿಸಲಾಗುತ್ತಿದ. ಮೇಲೆ ಓದಲಾದ (1)ರ ಸರ್ಕಾರದ ಆದೇಶದನ್ವಯ ರಾಜ್ಯದ ಎಲ್ಲಾ ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿದಲ್ಲಿ ತಗಲುವ ಅಂದಾಜು ವೆಚ್ಚ ರೂ.286.08 ಕೋಟಿಗಳನ್ನು ಮತ್ತು ಪ್ರತಿ ಬಸ್‌ ಪಾಸ್‌ನ ಸಂಸ್ಕರಣಾ ಶುಲ್ಕ ರೂ. 100/- ಹಾಗೂ ಅಪಘಾತ ಪರಿಹಾರ ನಿಧಿ ರೂ.50/-ರಂತೆ (ಪ್ರತಿ ತಿಂಗಳಿಗೆ ರೂ.5ರಂತೆ) ಒಟ್ಟು ಅಂದಾಜು ವೆಚ್ಚ ರೂ.15.00 ಕೋಟಿಗಳನ್ನು ಸರ್ಕಾರದಿಂದ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಭರಿಸುವಂತೆ ಹಾಗೂ 2026-27ನೇ ಶೈಕ್ಷಣಿಕ ಸಾಲಿನಲ್ಲಿ ದಿನಾಂಕ:30.05.2026 ರಿಂದ ದಿನಾಂಕ:09.06.2026ರವರೆಗೆ ನಾಲ್ಕು ನಿಗಮ / ಸಂಸ್ಥೆಗಳಿಂದ ಒಟ್ಟಾರ 19792 ರಿಯಾಯಿತಿ ದರದಲ್ಲಿ ಪಾಸುಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದ್ದು, ಉಚಿತ ಬಸ್ ಪಾಸ್ ವ್ಯವಸ್ಥೆ ಜಾರಿಯಾಗುವವರೆಗೆ ವಿತರಿಸಲಾದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪಾಸಿನ ಮೊತ್ತವನ್ನು ವಿದ್ಯಾರ್ಥಿಗಳಿಗೆ ಮರುಪಾವತಿಸಲು ಅನುಮೋದನೆ ನೀಡುವಂತೆ ಕೋರಿರುತ್ತಾರೆ.

ಪ್ರಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ:ಟಿಡಿ 65 ಟಿಸಿಬಿ 2026, ದಿನಾಂಕ:11.06.2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ಪ್ರಯಾಣಿಸುವ ರಾಜ್ಯದ ಶಾಲಾ ಕಾಲೇಜುಗಳಲ್ಲಿನ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌ಗಳನ್ನು ವಿತರಿಸಲು ತಕ್ಷಣದಿಂದ ಜಾರಿಗೆ ಬರುವಂತೆ ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಮೋದನೆ ನೀಡಿ ಆದೇಶಿಸಿದೆ.

ಷರತ್ತುಗಳೇನು?

1. ರಾಜ್ಯ ರಸ್ತೆ ಸಾರಿಗೆ ನಿಗಮ / ಸಂಸ್ಥೆಗಳು ವಿದ್ಯಾರ್ಥಿ ಬಸ್ ಪಾಸ್ ವಿತರಣೆಯಲ್ಲಿ ಹಾಲಿ ಅನುಸರಿಸುತ್ತಿರುವ ನಿಯಮಾವಳಿಗಳನ್ನು (ವಿದ್ಯಾರ್ಥಿ ಪಾಸಿಗಾಗಿ ಶೈಕ್ಷಣಿಕ ವಿದ್ಯಾಭ್ಯಾಸದ ಅರ್ಹತಾಮಾನದಂಡಗಳು, ದೂರದ ಮಿತಿ, ಪಾಸಿನ ಕಾಲಾವಧಿ ಇತ್ಯಾದಿ) ಅನುಸರಿಸತಕ್ಕದ್ದು;

2. ವಿದ್ಯಾರ್ಥಿಗಳು ಕರ್ನಾಟಕ ಸರ್ಕಾರದ ಸೇವಾ ಸಿಂಧು ಪೋರ್ಟಲ್‌ನಲ್ಲಿ ಶಾಲೆಗಳು ಸೇರಿದಂತೆ ಎಲ್ಲಿಂದಲಾದರೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

3. ಈಗಾಗಲೇ ವಿತರಿಸಲಾಗಿರುವ ಬಸ್ ಪಾಸ್‌ಗಳು ಯಥಾವತ್ತಾಗಿ ಚಾಲ್ತಿಯಲ್ಲಿರುತ್ತವೆ. ಆದಾಗ್ಯೂ ವಿದ್ಯಾರ್ಥಿಗಳು ಪಾವತಿಸಿರುವ ಮೊತ್ತವನ್ನು ಹಿಂತಿರುಗಿಸಲಾಗುವುದು.

4. ರಾಜ್ಯದಲ್ಲಿ ವಾಸವಿದ್ದು, ನರರಾಜ್ಯಗಳಲ್ಲಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ನೆರೆರಾಜ್ಯಗಳಲ್ಲಿ (ರಾಜ್ಯದ ಗಡಿಭಾಗದಲ್ಲಿ) ವಾಸವಿದ್ದು, ರಾಜ್ಯದೊಳಗಿನ ವಿದ್ಯಾಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ಒದಗಿಸತಕ್ಕದ್ದು;

5. ಉಚಿತ ಬಸ್ ಪಾಸ್ ಯೋಜನೆ ಜಾರಿಯಾಗುವುದರಿಂದ ಶುಲ್ಕ ಪಡೆದು ವಿತರಿಸಲಾದ ಪಾಸುಗಳ ಸಂಪೂರ್ಣ ಶುಲ್ಕವನ್ನು 15 ದಿನಗಳೊಳಗಾಗಿ ವಿದ್ಯಾರ್ಥಿಗಳಿಗೆ ಮರುಪಾವತಿಸತಕ್ಕದ್ದು;

ಈ ಆದೇಶವನ್ನು ಸಚಿವ ಸಂಪುಟದ ಪ್ರಕರಣ ಸಂಖ್ಯೆ:ಸಿ.310/2026, ದಿನಾಂಕ:03.06.2025ರನ್ವಯ ಹೊರಡಿಸಲಾಗಿದೆ.

School and College Students Free Bus Pass

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Author: mastermitra

Leave a Reply

Your email address will not be published. Required fields are marked *