SSLC Result Improvement Initiative:ಕಲ್ಯಾಣ ಕರ್ನಾಟಕ ಶಿಕ್ಷಕರಿಗೆ ₹1000 ಪ್ರೋತ್ಸಾಹಧನ
SSLC Result Improvement Initiative:ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ SSLC ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಪ್ರತಿಶತ ಫಲಿತಾಂಶ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಹೊಸ ಕ್ರಮ ತೆಗೆದುಕೊಂಡಿದೆ. ಈ ನಿಟ್ಟಿನಲ್ಲಿ ಫಲಿತಾಂಶ ಸುಧಾರಣೆಗೆ ರಾಜ್ಯ ಭಾಗದಲ್ಲಿ ಬರುವ ಜಿಲ್ಲೆಗಳಲ್ಲಿನ ಸರ್ಕಾರಿ ಪ್ರೌಢಶಾಲಾ ಶಿಕ್ಷಕರಿಗೆ ಹೆಚ್ಚುವರಿಯಾಗಿ ಒಂದು ಸಾವಿರ ರೂ. ಪ್ರೋತ್ಸಾಹಧನ ನೀಡಲು ಮುಂದಾಗಿದೆ.
ಕಳೆದ ಶೈಕ್ಷಣಿಕ ಸಾಲಿನಲ್ಲಿ ಕಳಪೆ ಫಲಿತಾಂಶ ದಾಖಲಿಸಿದ್ದ ಜಿಲ್ಲೆಗಳಲ್ಲಿ ಫಲಿತಾಂಶ ಸುಧಾರಣೆ ಜೊತೆಗೆ ಎಸ್ಸೆಸ್ಸೆಲ್ಸಿ ಪ್ರತಿ ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲೂ ಕನಿಷ್ಠ 40 ಅಂಕಗಳನ್ನು ಪಡೆಯುವಂತೆ ಶಿಕ್ಷಕರು ಸಿದ್ಧಗೊಳಿಸಬೇಕಿದೆ. ಇದಕ್ಕಾಗಿ ಅವರು ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಬೇಕಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆಯನ್ನು ಸಹ ಹೊರಡಿಸಿದೆ.

ಮಕ್ಕಳು ಮತ್ತು ಶಿಕ್ಷಕರನ್ನು ಪ್ರೋತ್ಸಾಹಿಸಲು ಸರ್ಕಾರ ಶಿಕ್ಷಕರಿಗೆ ಪ್ರೋತ್ಸಾಹಧನ ಘೋಷಣೆಯನ್ನು ಮಾಡಿದೆ. ನಿಗದಿತ ಶಾಲಾ ಅವಧಿ ಮುಗಿದ ಬಳಿಕ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಆಯಾ ಶಾಲೆಗಳ ಶಿಕ್ಷಕರು ವಿಶೇಷ ತರಗತಿಗಳನ್ನು ಕೈಗೊಳ್ಳಬೇಕಿದೆ. ಈ ವೇಳೆ ವಿದ್ಯಾರ್ಥಿಗಳ ಬರವಣಿಗೆ ಕೌಶಲ್ಯ, ಪಾಠಗಳ ಪುನರಾವರ್ತನೆ ಮೂಲಕ ಅವರನ್ನು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆಯುವಂತೆ ಮಾಡಬೇಕಿದೆ.
ಜನವರಿಯಿಂದ ವಿಶೇಷ ತರಗತಿ:
ಹೊಸ ಶೈಕ್ಷಣಿಕ ವರ್ಷದಿಂದ ಪ್ರೌಢಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿ ಸೆಸ್ಸೆಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಮುಂದಿನ ಮೂರು ತಿಂಗಳ ಅವಧಿಗೆ ಶಿಕ್ಷಕರು ತೆಗೆದುಕೊಳ್ಳಬೇಕಿದೆ ಎಂದು ಸರ್ಕಾರ ಸುತ್ತೋಲೆಯಲ್ಲಿ ತಿಳಿಸಿದೆ.”
“ಮೂರು ತಿಂಗಳ ಕಾಲ ಪ್ರೌಢಶಾಲೆಗಳ ವಿಷಯವಾರು ಶಿಕ್ಷಕರು ತರಗತಿಗಳನ್ನು ನಡೆಸಬೇಕು.
ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಫಲಿತಾಂಶ ಪ್ರಮಾಣವನ್ನು ಶೇ. 80ಕ್ಕೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಈ ವ್ಯಾಪ್ತಿಯ 7,200 ಶಿಕ್ಷಕರು ವಿಶೇಷ ತರಗತಿಗಳನ್ನು ತೆಗೆದುಕೊಳ್ಳಲಿದ್ದು, ಅವರಿಗೆ ಪ್ರತಿ ತಿಂಗಳು ಹೆಚ್ಚುವರಿ ಒಂದು ಸಾವಿರ ರೂಪಾಯಿ ಪ್ರೋತ್ಸಾಹಧನ ಸಿಗಲಿದೆ” ಎಂದು ಶಾಲಾ ಶಿಕ್ಷಣ ಅಧಿಕಾರಿ ತಿಳಿಸಿದ್ದಾರೆ.