State Civil Services Recruitment: ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ
State Civil Services Recruitment: ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ: ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷದ ಸಡಿಲಿಕೆ ನೀಡಲಾಗಿದೆ. ಸಂಪೂರ್ಣ ಮಾಹಿತಿ ಓದಿ.
ಪ್ರಸ್ತಾವನೆ:
1.ಮೇಲೆ (2) ರಲ್ಲಿ ಓದಲಾದ ದಿನಾಂಕ:29.09.2025ರ ಆದೇಶದಲ್ಲಿ ದಿನಾಂಕ: 06.09.2025ರ ಆದೇಶವನ್ನು ಹಿಂಪಡೆದು, ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.
2. ನಂತರದಲ್ಲಿ ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿದಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 262 ಸೇನೆನಿ 2025 ಬೆಂಗಳೂರು ದಿನಾಂಕ: 29.01.2026
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಮೇಲೆ (2)ರಲ್ಲಿ ಓದಲಾದ ದಿನಾಂಕ: 29.09.2025ರ ಆದೇಶವನ್ನು ಹಿಂಪಡೆದು, ಈ ಆದೇಶ ಹೊರಡಿಸಿದ ದಿನಾಂಕದ ನಂತರ ಮುಂದಿನ ದಿನಾಂಕ 31.12.2027 ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 5 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ.



